Friday, June 5, 2026
Homeಕರಾವಳಿವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳ್ಳತನ

ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳ್ಳತನ

- Advertisement -
- Advertisement -

ವಿಟ್ಲ: ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿರುವ ಘಟನೆ ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.

ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು ನಿಲ್ಲಿಸಿ ಕಾಣಿಕೆ ಹಾಕಿ ಹೋಗುತ್ತಾರೆ. ನಿನ್ನೆ ರಾತ್ರಿ ಯಾರೋ ಖದೀಮರು ಕಾಣಿಕೆ ಹುಂಡಿಯನ್ನು ಎಗರಿಸಿರುತ್ತಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

- Advertisement -

Latest News

error: Content is protected !!