Sunday, May 19, 2024
Homeಅಪರಾಧಪಡುಬಿದ್ರಿಯ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ; ಬೆಳ್ಳಿಯ ತಟ್ಟೆಗಳನ್ನು ಕಳವುಗೈದ ಕಳ್ಳರು

ಪಡುಬಿದ್ರಿಯ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ; ಬೆಳ್ಳಿಯ ತಟ್ಟೆಗಳನ್ನು ಕಳವುಗೈದ ಕಳ್ಳರು

spot_img
- Advertisement -
- Advertisement -

ಪಡುಬಿದ್ರಿ: ಇಲ್ಲಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಛೇರಿಯಲ್ಲಿ 20,000 ರೂಪಾಯಿ ಮೌಲ್ಯದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳ್ಳವುಗೈದಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇವಸ್ಥಾನದ ಒಳಾಂಗಣವನ್ನು ಧ್ವಜಸ್ತಂಭದ ಮೇಲೇರಿ ಪ್ರವೇಶಿಸಿದ ಕಳ್ಳರು, ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ. ಇನ್ನೂ ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ.

ಇನ್ನೂ ದ್ವಾರದಲ್ಲಿದ್ದ ಎರಡು ಲಾಕರ್‌ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕಂಡು ಬಂದಿದ್ದು, ದೇಗುಲದ‌ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ ಎನ್ನಲಾಗಿದೆ. ಕಳ್ಳರು ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ. 

ಬೆಳಗ್ಗಿನ ಸಮಯದಲ್ಲಿ ದೇಗುಲದ ಸಹ ಅರ್ಚಕ ರಾಜಾರಾಮ್‌ ಭಟ್‌ ಅವರು ದೇಗುಲಕ್ಕೆ ಬಂದಾಗ ಬಾಗಿಲು ತೆರೆದಿದ್ದು, ಕಳ್ಳತನವಾದ ಕುರಿತು ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ. ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್‌ ಶೆಟ್ಟಿ ಪಡುಬಿದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!