- Advertisement -
![]()
- Advertisement -
ಬೆಳ್ತಂಗಡಿ : ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಕಟ್ಟಡದ ನೆಲ ಮಹಡಿಯಲ್ಲಿರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಆ.13 ರಂದು ಭಾನುವಾರ ರಾತ್ರಿ ಸಂಭವಿಸಿದೆ.

ವೈನ್ಸ್ ಶಾಪ್ ನ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರಕ್ಕೂ ಹೆಚ್ಚು ನಗದು ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮದ್ಯದ ಬಾಟ್ಲಿಗಳನ್ನೂ ಕಳ್ಳತನ ಮಾಡಲಾಗಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -


