Wednesday, June 3, 2026
Homeಕರಾವಳಿಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಗಳ ಲಕ್ಷಾಂತರ ಮೌಲ್ಯದ ವಸ್ತುಗಳ ಕಳವು

ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಗಳ ಲಕ್ಷಾಂತರ ಮೌಲ್ಯದ ವಸ್ತುಗಳ ಕಳವು

- Advertisement -
- Advertisement -

ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಗಳ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ (38) ಎಂಬವರು ದಿನಾಂಕ:26-08-2023 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು.  ಕಾರನ್ನು ದೇವಸ್ಥಾನದ ಹತ್ತಿರ ನಿಲ್ಲಿಸಿ ಕಾರಿಗೆ ಲಾಕ್‌ ಮಾಡಿ ದೇವರ ದರ್ಶನಕ್ಕೆ ಹೋದವರು, ಸ್ವಲ್ಪ ಸಮಯದ ಬಳಿಕ ಹಿಂತಿರುಗಿ ಬಂದು ಕಾರನ್ನು ನೋಡಿದಾಗ ಯಾರೋ ಕಳ್ಳರು ಕಾರಿನ ಗ್ಲಾಸ್‌ ಅನ್ನು ಹೊಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿದ್ದಾರೆ ಎಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರಿನಲ್ಲಿ  ವ್ಯಾನಿಟಿ ಬ್ಯಾಗ್‌ ನಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರ ಅಂದಾಜು ಮೌಲ್ಯ 196000/ ರೂ ಮತ್ತು 1 ಮೊಬೈಲ್ ಮೊಬೈಲ್‌ ಅಂದಾಜು ಮೌಲ್ಯ 4000/  ಇನ್ನು ಕಳವವಾದ ವಸ್ತುಗಳ ಒಟ್ಟು ಮೌಲ್ಯ 200000/ ರೂ ಆಗಿರಬಹುದು ಎಂದು  ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ.

- Advertisement -

Latest News

error: Content is protected !!