- Advertisement -


- Advertisement -
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ. ಥೀಮ್ ಪಾರ್ಕ್ ನ ಬಾಗಿಲನ್ನು ಒಡೆದು ಒಳ ನುಗ್ಗಿರುವ ಕಳ್ಳರು ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಳ್ಳತನ ಮಾಡಿದ್ದಾರೆ.
2023ರ ಸಪ್ಟೆಂಬರ್ ತಿಂಗಳಿನಲ್ಲಿಯೇ ಥೀಮ್ ಪಾರ್ಕ್ ಗೆ ಸಾರ್ವಜನಿಕ ಪ್ರವೇಶವನ್ನು ನಿರಾಕರಿಸಿ ಸ್ಥಳೀಯ ಆಡಳಿತ ಆದೇಶ ಹೊರಡಿಸಿತ್ತು. ಆದರೂ ಕೆಲವರು ಕಾನೂನು ಬಾಹಿರವಾಗಿ ಇಲ್ಲಿಗೆ ಒಳನುಗ್ಗಿ ವಿಡಿಯೋ ಚಿತ್ರೀಕರಣ ನಡೆಸಿದ್ದ ಘಟನೆಯೂ ನಡೆದಿತ್ತು.
ಈ ಪ್ರಕರಣದಲ್ಲಿ ಉಡುಪಿ ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿರುವ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ವಿಡಿಯೋ ಮಾಡಿದವರನ್ನೂ ವಿಚಾರಣೆಗೆ ಒಳಪಡಿಸುವ ಜತೆಗೆ ಕಳ್ಳತನ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
- Advertisement -


