Thursday, June 4, 2026
Homeಕರಾವಳಿಕಡಬ; ದರ್ಗಾದ ಬಾಗಿಲು ಮುರಿದು ಕಳ್ಳತನ

ಕಡಬ; ದರ್ಗಾದ ಬಾಗಿಲು ಮುರಿದು ಕಳ್ಳತನ

- Advertisement -
- Advertisement -

ಕಡಬ; ದರ್ಗಾದ ಬಾಗಿಲು ಮುರಿದು ಒಳಗೆ ನುಗ್ಗಿದ  ಕಳ್ಳರು ಕಳ್ಳತನ ಮಾಡಿರುವ ಘಟನೆ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದಲ್ಲಿ ನಡೆದಿದೆ.

ಇಂದು ಬೆಳಗ್ಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -

Latest News

error: Content is protected !!