Friday, June 5, 2026
Homeಕರಾವಳಿಮೂಡಬಿದರೆ;;ಹಾಡಹಗಲೇ ಎರಡು ಮನೆಗಳಿಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ

ಮೂಡಬಿದರೆ;;ಹಾಡಹಗಲೇ ಎರಡು ಮನೆಗಳಿಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ

- Advertisement -
- Advertisement -

ಮೂಡಬಿದಿರೆ: ಹಾಡಹಗಲೇ ಎರಡು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಆಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಿನ್ನೆ ಬೆಳಗ್ಗೆ ನಡೆದಿದೆ.

ನಿವೃತ್ತ ಬ್ಯಾಂಕ್‌ ಅಧಿಕಾರಿಗಳಾದ “ಕ್ಷೇಮ’ ಮನೆಯ ರತ್ನಾಕರ ಜೈನ್‌ ಮತ್ತು ಅಲ್ಲೇ ಪಕ್ಕದ “ಸ್ನೇಹ’ ಮನೆಯ ಧೀರೇಂದ್ರ ಹೆಗ್ಡೆ ಅವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆಗೆ ಪೂಜೆ ಸಲ್ಲಿಸಲು ಬಸದಿಗಳಿಗೆ ತೆರಳಿದ್ದರು. ಈ ವೇಳೆ ಕಳ್ಳರು ರತ್ನಾಕರ ಜೈನ್‌ ಅವರ ಮನೆಯ ಹಿಂಬಾಗಿಲಿನ ಚಿಲಕನ್ನು ಮುರಿದು ಒಳಗೆ ನುಗ್ಗಿ  25 ಪವನ್‌ ಚಿನ್ನ ಮತ್ತು 20 ಸಾವಿರ ನಗದು ಹಾಗೂ ಧೀರೇಂದ್ರ ಹೆಗ್ಡೆ ಅವರ ಮುಂಬಾಗಿಲಿನ ಚಿಲಕ ಮುರಿದು 20 ಗ್ರಾಂ ಚಿನ್ನ ಹಾಗೂ 60 ಸಾವಿರ ನಗದನ್ನು ಕದ್ದಿದ್ದಾರೆ. ಒಟ್ಟು ಸುಮಾರು 10 ಲಕ್ಷ ರೂ. ಮೊತ್ತದ ವಸ್ತುಗಳು ಕಳ್ಳತನವಾಗಿದೆ.

ಪಣಂಬೂರು ಎಸಿಪಿ ಮನೋಜ್‌ ಕುಮಾರ್‌ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಬಿದಿರೆ ಪೊಲೀಸ್‌ ನಿರೀಕ್ಷಕ ನಿರಂಜನ್‌ ಕುಮಾರ್‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!