Wednesday, May 1, 2024
Homeಕರಾವಳಿಮಂಗಳೂರು: ಹಿಜಾಬ್ ವಿವಾದ, ಜಿಲ್ಲೆಯ ವಿವಿಧೆಡೆ ಬಿಗಿ ಪೊಲೀಸ್‌ ಬಂದೋಬಸ್ತ್

ಮಂಗಳೂರು: ಹಿಜಾಬ್ ವಿವಾದ, ಜಿಲ್ಲೆಯ ವಿವಿಧೆಡೆ ಬಿಗಿ ಪೊಲೀಸ್‌ ಬಂದೋಬಸ್ತ್

spot_img
- Advertisement -
- Advertisement -

ಮಂಗಳೂರು: ನಿನ್ನೆ ಹಿಜಾಬ್‌ ವಿವಾದದ ಕುರಿತು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಸುಮಾರು 1,200 ಮಂದಿ ಪೊಲೀಸರು ಬಂದೋಬಸ್ತ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮಾ. 19ರ ಸಂಜೆ 6ರ ವರೆಗೆ ಸೆ. 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೆಲವು ಶಕ್ತಿಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ಪ್ರತಿಯೊಬ್ಬರೂ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಅನುಸರಿಸಬೇಕು, ಸರಕಾರ ಈಗಾಗಲೇ ಶಾಲೆಗಳಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂದು ಆದೇಶ ನೀಡಿತ್ತು. ನ್ಯಾಯಾಲಯ ಅದನ್ನೇ ತಿಳಿಸಿದೆ. ವಿದ್ಯಾರ್ಥಿನಿಯರು ಆದೇಶವನ್ನು ಪಾಲಿಸಿ ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!