Tuesday, July 1, 2025
Homeಕರಾವಳಿಹಿಜಾಬ್ ವಿವಾದದ ನಡುವೆ ಹತ್ಯೆ, ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ: ...

ಹಿಜಾಬ್ ವಿವಾದದ ನಡುವೆ ಹತ್ಯೆ, ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ: ನಳಿನ್ ಕುಮಾರ್ ಕಟೀಲ್

spot_img
- Advertisement -
- Advertisement -

ಮಂಗಳೂರು: ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಹತ್ಯೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ” ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ. ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಸನ್ಮಾನ್ಯ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹಸಚಿವರಾದ ಅರಗ ಜ್ಞಾನೇಂದ್ರ ಅವರಲ್ಲಿ ಮನವಿ ಮಾಡುತ್ತೇನೆ. ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಕೊಲೆ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೂ ಹಿಜಾಬ್ ವಿವಾದಕ್ಕೂ ಏನಾದರೂ ಸಂಬಂಧ ಇದೆಯೇ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

- Advertisement -
spot_img

Latest News

error: Content is protected !!