Sunday, April 28, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ- ಕೋಟ ಶ್ರೀನಿವಾಸ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ- ಕೋಟ ಶ್ರೀನಿವಾಸ್ ಪೂಜಾರಿ

spot_img
- Advertisement -
- Advertisement -

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡದಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಈ ಲಾಕ್ ಡೌನ್ ನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಜನಪ್ರತಿನಿಧಿಗಳಿಂದ ಹಾಗೇ ಸಾರ್ವಜನಿಕರಿಂದಲೇ ಲಾಕ್ ಡೌನ್ ಗೆ ಒಲವು ವ್ಯಕ್ತವಾಗುತ್ತಿದೆ. ಜಿಲ್ಲಾಡಳಿತಕ್ಕೆ ಜನಪ್ರತಿನಿಧಿ ಹಾಗೂ ಸಾರ್ವಜನಿಕರು ಲಾಕ್ ಡೌನ್ ಮುಂದುವರೆಸುವಂತೆ ಒತ್ತಾಯಿಸುತ್ತಿದ್ದಾರೆ. ಹಾಗಾಗಿ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಇಂದು ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಲಿದೆ.  ಲಾಕ್ ಡೌನ್ ವಿಸ್ತರಿಸಬೇಕೇ ಅನ್ನೋ ಕುರಿತು  ಸಭೆಯಲ್ಲಿ ಚರ್ಚೆ ನಡೆಯಲಿದೆ. ಆ ಬಳಿಕ ಸಿಎಂ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು  ದ.ಕ‌ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!