Sunday, June 7, 2026
Homeತಾಜಾ ಸುದ್ದಿಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಂಪುಟ ಪುನಾರಚನೆ ಬೇಕೇ ಬೇಡವೇ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕುಮಾರಕೃಪಾ ಅತಿಥಿಗೃಹದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಮುಂದಿನ ಚುನಾವಣೆ ತಯಾರಿ ಸಂಬಂಧಿಸಿದಂತೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಸಂಪುಟ ಪುನಾರಚನೆಯು ಇಂದು ಚರ್ಚೆಗೆ ಬರುವುದಿಲ್ಲ. ಈ ಬಗ್ಗೆ ಸಿಎಂ ನಿರ್ಧಾರ ಕೈಗೊಂಡು ಬಳಿಕ ವರಿಷ್ಠರೊಂದಿಗೆ ಮಾತುಕತೆ ನಡೆಸುತ್ತಾರೆ ಎಂದರು.

ಸಿಎಂ ಗಂಡಸ್ತನದ ಬಗ್ಗೆ ಅವರು ಪ್ರಶ್ನೆ ಮಾಡುವುದು ಅನಗತ್ಯ. ಅವರು ತಾಜ್ ಹೊಟೇಲ್ ನಲ್ಲಿದ್ದು ಅವರ ಸರ್ಕಾರ ಪತನವಾಯಿತು. ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದರಿಂದ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದರು.

ಹಲಾಲ್ ಕಟ್ ಮಾಂಸ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಜಾಬ್ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕ್ರಮ ಕೈಗೊಂಡಿದೆ. ಅದೇ ರೀತಿ ಕಾನೂನಾತ್ಮಕ ಪರಿಹಾರ ಈ ವಿಚಾರದಲ್ಲಿಯೂ ನೀಡಲಾಗುತ್ತದೆ ಎಂದರು.

- Advertisement -

Latest News

error: Content is protected !!