Monday, April 29, 2024
HomeUncategorizedಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಸರ್ಕಾರದ ಮುಂದಿಲ್ಲ- ಸಿಎಂ ಯಡಿಯೂರಪ್ಪ

ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಸರ್ಕಾರದ ಮುಂದಿಲ್ಲ- ಸಿಎಂ ಯಡಿಯೂರಪ್ಪ

spot_img
- Advertisement -
- Advertisement -

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕು ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ ಡೌನ್ ಮುಂದುವರಿಸಬೇಕು. ಒಟ್ಟು 14 ದಿನಗಳ ಕಾಲ ಲಾಕ್‍ಡೌನ್ ಜಾರಿ ಮಾಡಬೇಕು ಎಂದು ಬಿಬಿಎಂಪಿ ಮೇಯರ್ ಗೌತಂ ಕುಮಾರ್ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಆದರೆ, ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನಸಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ, ಅಷ್ಟ ದಿಕ್ಪಾಲಕ ಉಸ್ತುವಾರಿಗಳ ಜತೆ ಸಭೆಯಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸೋದಕ್ಕೆ ತಿಳಿಸಿದ್ದಾರೆ. ಹಾಗೇ ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ

ತೀವ್ರತರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಿ ಹಾಗೇ  ಆಸ್ಪತ್ರೆ ಯಲ್ಲಿ   ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸಬೇಕು ಎಂದಿದ್ದಾರೆ.

ಹಾಗೇ ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ. ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ.ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿ ಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದಿದ್ದಾರೆ. ಹಾಗೇ ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸಿ ಎಂದು ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!