ಮೈಸೂರು: ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ನಮ್ಮಲ್ಲಿ ಯಾವುದೇ ರೀತಿಯ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ,’ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ಕಾಂಗ್ರೆಸ್ ಪಕ್ಷವು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.
ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.


