Wednesday, June 26, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು; ಶಾಲಾ ಆರಂಭ...

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು; ಶಾಲಾ ಆರಂಭ ಸದ್ಯಕ್ಕಿಲ್ಲ!

spot_img
- Advertisement -
- Advertisement -

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳು ಆ. 23ರಿಂದ ಆರಂಭವಾಗುವುದಿಲ್ಲ ಎಂದು ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಜಿಲ್ಲಾಧಿಕಾರಿಗಳ ನಿರ್ದೇಶನದನುಸಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಈಗಾಗಲೇ ಜಾರಿಯಲ್ಲಿರುವಂತೆ ಶಿಕ್ಷಕರು ಆನ್‌ಲೈನ್‌ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸುವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!