Tuesday, May 7, 2024
Homeಕರಾವಳಿಪಂಚಾಯತ್ ಮತ್ತು ಸಾರ್ವಜನಿಕರು ಉತ್ತಮ ಬಾಂಧವ್ಯದಿಂದಿರಬೇಕು : ಮಾಣಿ ಗ್ರಾ. ಪಂ. ಅಧ್ಯಕ್ಷ ಬಾಲಕೃಷ್ಣ ಆಳ್ವ...

ಪಂಚಾಯತ್ ಮತ್ತು ಸಾರ್ವಜನಿಕರು ಉತ್ತಮ ಬಾಂಧವ್ಯದಿಂದಿರಬೇಕು : ಮಾಣಿ ಗ್ರಾ. ಪಂ. ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ

spot_img
- Advertisement -
- Advertisement -

ಮಾಣಿ: ಪಂಚಾಯತ್ ನಿಂದ ಸಿಗಬಹುದಾದ ಸೇವೆ ಮತ್ತು ಸೌಲಭ್ಯಗಳು ಸಮರ್ಪಕವಾಗಿ ವಿನಿಯೋಗವಾಗಬೇಕಾದರೆ ಜನಪ್ರತಿನಿಧಿಗಳ ಜೊತೆಗೆ ಗ್ರಾಮಸ್ಥರು ಕೂಡಾ ಕೈಜೋಡಿಸಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಾಣಿ ಪಂಚಾಯತ್ ಸಭಾಂಗಣದಲ್ಲಿ ಜರಗಿದ ‘ನನ್ನ ಪಂಚಾಯತ್ ನನ್ನ ಅಧಿಕಾರ, ನಮ್ಮಿಂದ ಜನರ ಸೇವೆ ಅಭಿಯಾನದ ನಾಗರಿಕ ಸನ್ನದು ಗ್ರಾಮ ಸಭೆ’ಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು,
ಇಡೀ ದೇಶದಲ್ಲಿ ಜನರಿಗೆ ಬಹಳಷ್ಟು ಹತ್ತಿರದಿಂದ ಸಿಗುವ ಆಡಳಿತ ವ್ಯವಸ್ಥೆ ಅಂದರೆ ಅದು ಗ್ರಾಮ ಪಂಚಾಯತ್. ಪಂಚಾಯತ್ ಮತ್ತು ಸಾರ್ವಜನಿಕರು ಉತ್ತಮ ಬಾಂಧವ್ಯದೊಂದಿಗೆ ಮುಂದುವರಿದಾಗ ಇದೊಂದು ಕುಟುಂಬವಾಗಿ ಪರಿವರ್ತನೆ ಆಗಲು ಸಾಧ್ಯವಿದೆ ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

ಗ್ರಾಮ ಸಭೆಯ ನೋಡೆಲ್ ಅಧಿಕಾರಿಯಾಗಿದ್ದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ರವರು ನಾಗರಿಕ ಸನ್ನದು ವಿಶೇಷ ಗ್ರಾಮ ಸಭೆಯ ಮಹತ್ವ ಮತ್ತು ಮುಂದಿನ ದಿನಗಳಲ್ಲಿ ಇದರಿಂದ ಸಿಗಬಹುದಾದ ಪ್ರಯೋಜನಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.

ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಜಲಪ್ರೇರಕಿ ಲೈಲಾಬಿ, ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿಯವರು ಸಹಕರಿಸಿದರು.

- Advertisement -
spot_img

Latest News

error: Content is protected !!