Saturday, May 4, 2024
Homeಕರಾವಳಿಮಂಗಳೂರು ಏರ್ ಪೋರ್ಟ್ ನಲ್ಲಿ 8 ದೇಶಗಳ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ : ಆರೋಗ್ಯ...

ಮಂಗಳೂರು ಏರ್ ಪೋರ್ಟ್ ನಲ್ಲಿ 8 ದೇಶಗಳ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ : ಆರೋಗ್ಯ ಇಲಾಖೆಯಿಂದ ಸುತ್ತೋಲೆ

spot_img
- Advertisement -
- Advertisement -

ಬೆಂಗಳೂರು: ಕೋವಿಡ್ 19 ನಾಲ್ಕನೇ ಅಲೆಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ತಪಾಸಣೆ, ಟೆಲಿ ಮಾನಿಟರಿಂಗ್ ಮತ್ತು ಸರ್ವೇಕ್ಷಣೆ ಕೈಗೊಳ್ಳುವ ಬಗ್ಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಗಳಲ್ಲಿ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ಜಪಾನ್, ಥೈಲ್ಯಾಂಡ್, ವಿಯೆಟ್ನಾಂ, ನ್ಯೂಜಿಲ್ಯಾಂಡ್, ರಷ್ಯಾ ಹಾಗೂ ಚೀನಾ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ‌ಮಾಡಲು ಸೂಚಿಸಲಾಗಿದೆ.

ಸೋಂಕಿನ ಲಕ್ಷಣಗಳಿರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಪ್ರಯೋಗಾಲಯದಲ್ಲಿಯೇ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸುವುದು ಹಾಗೂ ಪಾಸಿಟಿವ್ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸುವುದು ಕಡ್ಡಾಯವಾಗಿದೆ.

ಕೋವಿಡ್ ದೃಢಪಟ್ಟ ಪ್ರಕರಣಗಳಿಗೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಚಿಕಿತ್ಸೆ ಮತ್ತು ನಿರ್ವಹಣೆಯನ್ನು ಮಾಡಬೇಕು ಮತ್ತು ಪ್ರಕ್ರಿಯೆಯ ದೈನಂದಿನ ವರದಿಯನ್ನು ನಮೂನೆ-1 ರಂತೆ ಐಡಿಎಸ್ಪಿ ಯೋಜನಾ ನಿರ್ದೇಶಕರಿಗೆ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

- Advertisement -
spot_img

Latest News

error: Content is protected !!