Wednesday, July 15, 2026
Homeಕರಾವಳಿಉಡುಪಿಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಕಾರ್ಕಳ: ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಿನ್ನೆ(ಡಿ.3) ರಾತ್ರಿ ನಡೆದಿದೆ.

ಕಲ್ಯಾ ಗ್ರಾಮದ ಕಂಗಿತ್ತು ನಿವಾಸಿ ಉಷಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. 4.50 ಲಕ್ಷ ರೂ.ಮೌಲ್ಯದ ಸುಮಾರು 156 ಗ್ರಾಂ ತೂಕದ ಚಿನ್ನ ಕಳವು ಮಾಡಿದ್ದಾರೆ ಎನ್ನಲಾಗಿದೆ.  ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!