Wednesday, June 3, 2026
Homeಕರಾವಳಿಕುಂದಾಪುರ: ರಾತ್ರೋರಾತ್ರಿ ಮನೆಗೆ ನುಗ್ಗಿ 20 ಲಕ್ಷಕ್ಕೂ ಅಧಿಕ ಮೌಲ್ಯದ ವಜ್ರಾಭರಣ, ಚಿನ್ನಾಭರಣ ಕಳವು

ಕುಂದಾಪುರ: ರಾತ್ರೋರಾತ್ರಿ ಮನೆಗೆ ನುಗ್ಗಿ 20 ಲಕ್ಷಕ್ಕೂ ಅಧಿಕ ಮೌಲ್ಯದ ವಜ್ರಾಭರಣ, ಚಿನ್ನಾಭರಣ ಕಳವು

- Advertisement -
- Advertisement -

ಕುಂದಾಪುರ: ರಾತ್ರೋರಾತ್ರಿ ಮನೆಗೆ ನುಗ್ಗಿ 20 ಲಕ್ಷಕ್ಕೂ ಅಧಿಕ ಮೌಲ್ಯದ ವಜ್ರಾಭರಣ, ಚಿನ್ನಾಭರಣ ಸೇರಿ 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಕುಂದಾಪುರ ಹೋಬಳಿಯ ವಿಠಲವಾಡಿಗೆ ಹೋಗುವ ರಸ್ತೆಯಲ್ಲಿರುವ ಶಿವರಾಮ ಶೆಟ್ಟಿ ಎಂಬುವರ ಮನೆಯಲ್ಲಿ ನಡೆದಿದೆ.

ಮನೆಯಲ್ಲಿ ಶಿವರಾಮ ಶೆಟ್ಟಿ ಹಾಗೂ ಅವರ ಪತ್ನಿ ಮಮತ ಇಬ್ಬರೇ ವಾಸವಿದ್ದರು. ಅವರ ಮಕ್ಕಳು ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಇಬ್ಬರೂ ಮನೆಗೆ ಬೀಗ ಹಾಕಿ ಬೆಂಗಳೂರಿಗೆ ಹೋಗಿದ್ದರೆನ್ನಲಾಗಿದೆ.

ಶನಿವಾರ ಬೆಳಿಗ್ಗೆ ಕೆಲಸದಾಕೆ ಹೂವಿನ ಗಿಡಕ್ಕೆ ನೀರು ಬಿಡಲು ಬಂದ ಸಂದರ್ಭ ಮನೆಯ ಬಾಗಿಲು ಅರ್ಧ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಮನೆಯ ಯಜಮಾನರಿಗೆ ಫೋನ್ ಮಾಡಿದ್ದಾಳೆ. ಬಳಿಕ ಮನೆ ಮಾಲೀಕರ ಸಂಬಂಧಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದ ವೇಳೆ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರಾಭರಣ ಹಾಗೂ ಬೆಲೆಬಾಳುವ ರೇಷ್ಮೆ ಸೀರೆಗಳನ್ನು ಕದ್ದೊಯ್ದಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!