Monday, June 8, 2026
Homeಚಿಕ್ಕಮಗಳೂರುನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿದ ಖದೀಮ; ಮಾಂಗಲ್ಯ ಸರ ಎಗರಿಸಲು ಯತ್ನಿಸಿ...

ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿದ ಖದೀಮ; ಮಾಂಗಲ್ಯ ಸರ ಎಗರಿಸಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳರು

- Advertisement -
- Advertisement -
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರವನ್ನು ಕದಿಯಲು ಕಳ್ಳರು ಯತ್ನಿಸಿರುವ ಘಟನೆ ನಡೆದಿದೆ.
 
ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಕಾರಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ
ಬಳಿಗೆ ತೆರಳಿ ನೀರು ಕೇಳಿದ್ದಾರೆ. ಈ ಸಮಯದಲ್ಲಿ ನೀರು ತರಲೆಂದು ಮಹಿಳೆ ಒಳಗೆ ಹೋದಾಗ ಓರ್ವ ಕಾರ್ ಒಳಗೆ ಕುಳಿತು ಹೊರಡಲು ತಯಾರಾಗಿದ್ದಾನೆ. ಮಹಿಳೆಯು ನೀರು ತಂದ ಕೂಡಲೇ ಆಕೆಯ ಕುತ್ತಿಗೆಗೆ ಕೈ ಹಾಕಿ ಸರ ಎಗರಿಸಲು ಇನ್ನೋರ್ವ ಯತ್ನಿಸಿದ್ದಾನೆ.

ಹೆದರಿದ ಮಹಿಳೆ ಕೂಡಲೇ ಕಿರುಚಾಡಿದಾಗ ಅಕ್ಕ ಪಕ್ಕದಲ್ಲಿದ್ದ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಆತನು ಪರಾರಿಯಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ಎಲ್ಲೂ ಹೋಗಲಾರದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಈ ಕೃತ್ಯ ಹೆಸಗಿರುವ ಆರೋಪಿಗಳು ಬಯಲುಸೀಮೆ ಮೂಲದವರಾಗಿದ್ದು, ಈ ಭಾಗದಲ್ಲಿ ಜೆಸಿಬಿ ಕೆಲಸವನ್ನು
ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಮನೆಯೊಂದಕ್ಕೆ ನುಗ್ಗಿದ ಕಳ್ಳರು ದರೋಡೆ ನಡೆಸಲು ಯತ್ನಿಸಿದ್ದರು, ಈ ಘಟನೆಯ ಕುರಿತಾಗಿ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಈ ಸಂದರ್ಭದಲ್ಲಿ ಇನ್ನೊಂದು ಕಳ್ಳತನದ ಯತ್ನವು ನಡೆದಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ.

ಇನ್ನೂ ಆರೋಪಿಗಳು ಈ ಕೃತ್ಯಕ್ಕೆ ಬಳಸಿದ್ದ ಕಾರ್ ಕೋಣಂದೂರು ಮೂಲದ ವ್ಯಕ್ತಿಯೋರ್ವರದ್ದು ಎನ್ನಲಾಗಿದೆ. ಕಳ್ಳರು ಕಾರನ್ನು ಯಾವ ಕಾರಣಕ್ಕಾಗಿ ತಂದದಿದ್ದರು ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಘಟನಾ ಸಂಬಂಧ ಆರೋಪಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಕೋರಿದ್ದಾರೆ.

- Advertisement -

Latest News

error: Content is protected !!