Friday, June 5, 2026
Homeಕರಾವಳಿಬಾಡಿಗೆ ಮನೆ ಹುಡುಕುವ ನೆಪದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ: ಉಳ್ಳಾಲದಲ್ಲಿ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸರು

ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ: ಉಳ್ಳಾಲದಲ್ಲಿ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಮನೆಗಳಿಗೆ ಹೋಗಿ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ, ಮಂಗಲ್ಪಾಡಿ ನಿವಾಸಿ ಮುಜೀಬ್ ರೆಹಮಾನ್ ಎಂ.ಎ. ಬಂಧಿತ ಆರೋಪಿ.

ಬಾಡಿಗೆ ಮನೆ ಕೇಳಿಕೊಂಡು ಉಳ್ಳಾಲದ ಬೆಳ್ಮ ಮತ್ತು ನಿತ್ಯಾನಂದ ನಗರದ ಅಶ್ವಿನಿ ಎಂಬವರ ಮನೆಗೆ ಹೋಗಿದ್ದ ಆರೋಪಿ ಮುಜೀಬ್ ಬಳಿಕ ಕೋಣೆಯೊಳಗೆ ನುಗ್ಗಿ 3.50 ಪವನ್ ತೂಕದ ಕರಿಮಣಿ ಸರ ಮತ್ತು 1 ಪವನ್ ತೂಕದ ಚಿನ್ನದ ಸರ ಸೇರಿ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವುದಾಗಿ ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಕಾಸರಗೋಡು ಜಿಲ್ಲೆಯ ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.  ಬಂಧಿತ ಆರೋಪಿಯಿಂದ 1.40 ಲಕ್ಷ‌ ರೂ. ಮೌಲ್ಯದ ಚಿನ್ನಾಭರಣ ಹಾಗೂ 35 ಸಾವಿರ ರೂ. ಮೌಲ್ಯದ ಆಯಕ್ಟಿವ್ ಹೋಂಡಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!