Wednesday, June 24, 2026
Homeಅಪರಾಧಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಕದ್ದ ಕಳ್ಳ: ಆರೋಪಿಯನ್ನ ಬಂಧಿಸಿದ ಪೊಲೀಸರು

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಕದ್ದ ಕಳ್ಳ: ಆರೋಪಿಯನ್ನ ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರವನ್ನ ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಸಿದ್ದಾರೆ.

ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ.

ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತು ಅವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿ ಡಿ.25ರಂದು ಸಂಜೆ 6.30ಕ್ಕೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದರು.

ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆದಿತ್ಯವಾರ ಬೆಳಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ.

ಈತನಿಂದ ಕಳವು ಮಾಡಲಾದ 32 ಗ್ರಾಂ ಚಿನ್ನದ ಕರಿಮಣಿ ಸರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಇಲೆಕ್ಟ್ರಿಕ್ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!