- Advertisement -
- Advertisement -
ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.
ಕಾರ್ಕಳದಲ್ಲಿ ಈ ಘಟನೆ ನಡೆದಿದ್ದು, ಚಿನ್ನಾಭರಣ ಮಳಿಗೆಯೊಂದರಲ್ಲಿ ಸುಮಾರು ಹದಿನೆಂಟು ಗ್ರಾಂ ಕರಿಮಣಿ ಸರವನ್ನು ಎಗರಿಸಿದ್ದ ವ್ಯಕ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.
ಪರಾರಿಯಾಗುತ್ತಿದ್ದ ವೇಳೆ ಕಳ್ಳ ಸಾರ್ವಜನಿಕರ ಕೈಗೆ ಸಿಕ್ಕಿ ಹಾಕಿಕೊಂಡಿದ್ದು, ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ.ಬಳಿಕ ಸಾರ್ವಜನಿಕರು ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
- Advertisement -