- Advertisement -
![]()
- Advertisement -
ಉಡುಪಿ; ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯ ಸರ ಕದ್ದಿದ್ದ ಮೂವರು ಕಳ್ಳಿಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡಿನ ಶೀಥಲ್ , ಕಾಳಿಯಮ್ಮ , ಮಾರಿ ಬಂಧಿತರು. ಹೆ
ಮೂವರು ಕಳ್ಳಿಯರು ಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ.ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ಸಂದರ್ಭದಲ್ಲಿ ಮೂವರು ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಕದ್ದಿದ್ದಾರೆ. ಸಿಸಿಟಿವಿಯಲ್ಲಿ ಮೂವರ ಕರಾಮತ್ತು ಸೆರೆಯಾಗಿದೆ. ಸುಮಾರು 2 ಲಕ್ಷ ಮೌಲ್ಯದ ಚಿನ್ನದ ಸರ ಎಂದು ಹೇಳಲಾಗಿದೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -


