Tuesday, July 14, 2026
Homeಕರಾವಳಿಉಡುಪಿಮಣಿಪಾಲದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಕಳ್ಳರು

ಮಣಿಪಾಲದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಕಳ್ಳರು

- Advertisement -
- Advertisement -

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಳ್ಳಿ ಗ್ರಾಮದ ಅಮಿತಾ ಡ್ಯಾನಿಯಲ್ ಕರ್ಕಡ ಇವರು ಫೆ. 3 ರಂದು ಮಧ್ಯಾಹ್ನ 01.45 ಗಂಟೆಗೆ ಮನೆಯ ಬಾಗಿಲು ಹಾಗೂ ಹೊರಗಿನ ಗೇಟಿಗೆ ಬೀಗ ಹಾಕಿ ತಾಯಿ ಮನೆಗೆ ತೆರಳಿದ್ದರು. ಫೆ. 02ರಂದು ಮಧ್ಯಾಹ್ನ 01.30 ಗಂಟೆಗೆ ಮನೆಯ ಬಾಗಿಲು ತೆರೆದಿರುವುದಾಗಿ ಪಕ್ಕದ ಮನೆಯವರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪಿರ್ಯಾದಿದಾರರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ, ದಿನಾಂಕ 03/02/2026 ರಂದು ಮಧ್ಯಾಹ್ನ 03.45 ಗಂಟೆಯಿಂದ 04/02/2026 ರಂದು ಮಧ್ಯಾಹ್ನ 02.00 ಗಂಟೆಯ ನಡುವಿನ ಅವಧಿಯಲ್ಲಿ ಅಜ್ಞಾತ ಕಳ್ಳರು ಮನೆಯೊಳಗೆ ಪ್ರವೇಶಿಸಿ ಸುಮಾರು 75 ಗ್ರಾಂ ತೂಕದ, ಅಂದಾಜು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!