- Advertisement -


- Advertisement -
ಬೈಂದೂರು: ತಾಲೂಕಿನ ಶಿರೂರು ಸಮೀಪದ ಮುದ್ರಮಕ್ಕಿಯಲ್ಲಿ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ನಗದು ಮತ್ತು ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಿರುವ ಶಿವರಾಮ ಪೂಜಾರಿ ಮತ್ತು ಅರುಣ್ ಮೊಗೇರ್ ಅವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಕಳ್ಳರು ಬಾಗಿಲು ಒಡೆದು ಒಳನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ 1 ಲಕ್ಷ ರೂ. ನಗದು ಹಾಗೂ 16 ಗ್ರಾಂ ಚಿನ್ನಾಭರಣಗಳನ್ನು ದೋಚಿದ್ದಾರೆ.
ಗುರುವಾರ ಹಲವು ಮದುವೆ ಹಾಗೂ ಇತರ ಕಾರ್ಯಕ್ರಮಗಳು ಇದ್ದ ಕಾರಣ ಅಕ್ಕಪಕ್ಕದ ಮನೆಗಳಲ್ಲಿಯೂ ಜನರು ಇರಲಿಲ್ಲ. ಕೆಲಸ ಮುಗಿಸಿ ಮನೆಗೆ ಮರಳಿದ ನಿವಾಸಿಗಳಿಗೆ ಕಳ್ಳತನ ನಡೆದಿರುವುದು ತಿಳಿದುಬಂದಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


