Monday, June 8, 2026
Homeಕರಾವಳಿಉಡುಪಿಕಾರ್ಕಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: 6 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿ ಕಳ್ಳರು...

ಕಾರ್ಕಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: 6 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿ ಕಳ್ಳರು ಪರಾರಿ

- Advertisement -
- Advertisement -

ಕಾರ್ಕಳ: ಮನೆಯಲ್ಲಿಟ್ಟಿದ್ದ ಸುಮಾರು 6 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಕಾರ್ಕಳದ ಮುಂಡೂರು ಗ್ರಾಮದ ಸಚ್ಚರಿಪೇಟೆ ಪೊಸ್ರಾಲ್ ಎಂಬಲ್ಲಿ ನಡೆದಿದೆ.

ವಿವಿಟಾ ಡಿಸೋಜಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ 6 ಲಕ್ಷ ರೂ ಮೌಲ್ಯದ ಸುಮಾರು 154 ಗ್ರಾಂ. ತೂಕದ ಚಿನ್ನದ ಒಡವೆಗಳನ್ನು ಇಟ್ಟು ಲಾಕ್ ಮಾಡಿ ಹೋಗಿದ್ದರು.  ಆದರೆ ಸೆ.5 ರಂದು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಇಟ್ಟಿದ್ದ ಚಿನ್ನ ಕಳವಾಗಿರುವುದು ಗಮನಕ್ಕೆ ಬಂದಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!