Friday, June 5, 2026
Homeಕರಾವಳಿಉಡುಪಿಉಡುಪಿಯಲ್ಲಿ ಮನೆ, ದೇವಸ್ಥಾನದಲ್ಲಿ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಉಡುಪಿಯಲ್ಲಿ ಮನೆ, ದೇವಸ್ಥಾನದಲ್ಲಿ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಉಡುಪಿ: ದೇವಸ್ಥಾನ ಹಾಗೂ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕಲ್ಲುಕಟ್ಟೆಯ ಗೋಪಾಲ (26), ಕೊಕ್ಕರ್ಣೆ ಜಾರುಜೆಡ್ಡುವಿನ ಅರುಣ್(26), ರವಿ ಕುಮಾರ್(28), ಸಾಸ್ತಾನ ಗುಂಡ್ಮಿಯ ರಜಾಕ್(41) ಬಂಧಿತ ಆರೋಪಿಗಳು.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ನೆಂಚಾರು ಗ್ರಾಮದ ಕರಬರಬೆಟ್ಟು ಎಂಬಲ್ಲಿ ನೀಲಕಂಠ ಕರಬ ಎಂಬವರ ಮನೆಗೆ ನುಗ್ಗಿದ ಕಳ್ಳರು 38,200 ರೂ. ಮೌಲ್ಯದ ಸೊತ್ತುಗಳನ್ನು ಹಾಗೂ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಗ್ರಾಮದ ಹ್ರಬ್ಬಾಡಿ ಮೂಲ ಜಟ್ಟಿಗ ಮತ್ತು ಬ್ರಹ್ಮ ದೈವಸ್ಥಾನದ ಕಂಚಿನ ಘಂಟೆಗಳು ಮತ್ತು ತೂಕಳಕಗಳು ಕಳವು ಆಗಿರುವ ಬಗ್ಗೆ ಜು.29ರಂದು ಕೋಟ ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ ದೇವಸ್ಥಾನದ ಘಂಟೆಗಳು, ದೀಪಗಳು ಹಾಗೂ ಇತರ ಪೂಜಾ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!