Thursday, June 4, 2026
Homeತಾಜಾ ಸುದ್ದಿಇದು ನನ್ನ ಕೊನೆಯ ಚುನಾವಣೆ ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಇದು ನನ್ನ ಕೊನೆಯ ಚುನಾವಣೆ ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

- Advertisement -
- Advertisement -

ಶಿವಮೊಗ್ಗ: ಇದು ನನ್ನ ಕೊನೆಯ ಚುನಾವಣೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ತೀರ್ಥಹಳ್ಳಿ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗಿಲ್ಲ. ಆದ್ರೇ ಟಿಕೆಟ್ ಗಾಗಿ ನಾನು ದೆಹಲಿಗೆ ಹೋಗಲ್ಲ ಎಂದಿದ್ದಾರೆ.  

ಇಂದು ಶಿವಮೊಗ್ಗದ ಹೊಸನಗರದ ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ನಾನು ಚುನಾವಣೆಗೆ ಸ್ಪರ್ಧಿಸೋದಕ್ಕೆ ಟಿಕೆಟ್ ಪಡೆಯಲು ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗಲ್ಲ ಎಂದಿದ್ದಾರೆ.

ನಾನು 10 ಬಾರಿ ಒಂದೇ ಚಿನ್ಹೆಯಿಂದ ಸ್ಪರ್ಧಿಸಿದ್ದೇನೆ. ಇದೇ ಪಕ್ಷದಿಂದ ನಾಲ್ಕು ಬಾರಿ ಗೆಲುವು ಸಾಧಿಸಿ, ಈಗ ಸಚಿವನೂ ಆಗಿದ್ದೇನೆ. 2023 ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿದೆ. ಈ ಬಳಿಕ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ನಾನು ತತ್ವಕ್ಕಾಗಿ, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡುವವನು. ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಿದ್ದೇನೆ. ನಾನು ಎಲ್ಲರ ನೆರವಿನಿಂದ ಬೆಳೆದಿದ್ದೇನೆ. ನನ್ನ ಕಾರ್ಯಕರ್ತರೇ ನನಗೆ ದೇವರು. ನನಗೆ ಶಾಸಕನಾಗಬೇಕು, ಮಂತ್ರಿಯಾಗಬೇಕು ಎಂಬ ಆಸೆಯಿಲ್ಲ ಎಂದಿದ್ದಾರೆ.

- Advertisement -

Latest News

error: Content is protected !!