Monday, September 9, 2024
Homeತಾಜಾ ಸುದ್ದಿಈ ಬಾರಿ ಅದ್ಧೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್.12ರಂದು ದಸರಾ ಜಂಬೂ ಸವಾರಿ ನಡೆಸಲು ಈಗಗಾಲೇ ಮುಹೂರ್ತ ಫಿಕ್ಸ್ ಆಗಿದೆ.

ಇಂದು ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ  , ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧಿಯ ಹಿನ್ನಲೆಯಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು.

ಅಕ್ಟೋಬರ್ 3 ರಿಂದ 12 ರವರೆಗೆ ನಡೆಯಲಿರುವ ದಸರಾ ನಡೆಯಲಿದೆ. ಅಕ್ಟೋಬರ್ 3 ರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ 12 ರ ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದರು.ಕಳೆದ ವರ್ಷ ದಸರೆಗೆ 30 ಕೋಟಿ ಖರ್ಚಾಗಿತ್ತು.ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ ಇಂಗಿತ ವ್ಯಕ್ತ ಪಡಿಸಲಾಗಿದೆ ಎಂದರು.ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!