Wednesday, July 15, 2026
Homeತಾಜಾ ಸುದ್ದಿಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಈ ಬಾರಿ ಬೇಸಿಗೆ ರಜೆಯಲ್ಲೂ ಸಿಗಲಿದೆ ಬಿಸಿಯೂಟ

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಈ ಬಾರಿ ಬೇಸಿಗೆ ರಜೆಯಲ್ಲೂ ಸಿಗಲಿದೆ ಬಿಸಿಯೂಟ

- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಈ ಬಾರಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ಸಿಗಲಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ರಜೆ ದಿನಗಳಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

1ರಿಂದ 8ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 11ರಿಂದ ಮೇ 28ರವರೆಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.ಸರ್ಕಾರ ಈಗಾಗಳೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದೆ. ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ.

- Advertisement -

Latest News

error: Content is protected !!