Wednesday, June 3, 2026
Homeತಾಜಾ ಸುದ್ದಿಈ ವರ್ಷವೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಬಗ್ಗೆ ಚರ್ಚೆ; ವಿಧಾನಪರಿಷತ್ ನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...

ಈ ವರ್ಷವೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಬಗ್ಗೆ ಚರ್ಚೆ; ವಿಧಾನಪರಿಷತ್ ನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ

- Advertisement -
- Advertisement -

ಬೆಂಗಳೂರು : ಈ ವರ್ಷವೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ವಿಚಾರದ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಎಂಎಲ್ ಸಿ ಎಂ.ಕೆ. ಪ್ರಾಣೇಶ್ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ಬೋಧಿಸುವ ಕುರಿತಂತೆ ಚರ್ಚೆ ನಡೆಯುತ್ತಿದೆ. ಈ ವರ್ಷವೇ ಭಗವದ್ಗೀತೆ ಬೋಧಿಸಬೇಕು ಎನ್ನುವ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಕುರಿತು ಚರ್ಚೆ ನಡೆಸಲಾಗುತ್ತಿದ್ದು, ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

Latest News

error: Content is protected !!