Thursday, June 4, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಅವರ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಇಂದು ಮಧ್ಯಾಹ್ನ ತಮ್ಮ ಕಚೇರಿಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದರು. ಈ ವೇಳೆ ನಿರಂತರವಾಗಿ ಮೊಬೈಲ್ ಸಂಖ್ಯೆಯೊಂದರಿಂದ ಕರೆ ಬಂದಿದೆ. ಡಿಸಿಯವರು ರಿಸೀವ್ ಮಾಡಿದಾಗ, ಅತ್ತಲಿಂದ ಅಪರಿಚಿತ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.

ಇದಷ್ಟೇ ಅಲ್ಲದೇ ತಕ್ಷಣ ಓರ್ವ ಕೆ ಎಂ ಎಫ್ ಸಿಬ್ಬಂದಿಯನ್ನು ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿ, ಇಲ್ಲವೇ ಕೊಲೆ ಮಾಡುವುದಾಗಿಯೂ ಜೀವ ಬೆದರಿಕೆ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಡಿಸಿಗೆ ಜೀವ ಬೆದರಿಕೆ ಹಾಕಿದ ಸಂಬಂಧ, ಪೊಲೀಸರಿಗೆ ದೂರು ನೀಡಿ, ತನಿಖೆಗೆ ಸೂಚಿಸಿದ್ದಾರೆ.

- Advertisement -

Latest News

error: Content is protected !!