Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಸಿ ಟಿ ರವಿ ಹಾಗೂ ಅವರ ಪುತ್ರನಿಗೆ ಬೆದರಿಕೆ ಪತ್ರ

ಚಿಕ್ಕಮಗಳೂರು: ಸಿ ಟಿ ರವಿ ಹಾಗೂ ಅವರ ಪುತ್ರನಿಗೆ ಬೆದರಿಕೆ ಪತ್ರ

- Advertisement -
- Advertisement -

ಚಿಕ್ಕಮಗಳೂರು: ಸಿ ಟಿ ರವಿ ಹಾಗೂ ಅವರ ಪುತ್ರನಿಗೆ ಅನಾಮಿಕರು ಬೆದರಿಕೆ ಪತ್ರ ಬರೆದಿದ್ದಾರೆ.

MLC ಸಿ.ಟಿ ರವಿ ಹಾಗೂ ಅವರ ಪುತ್ರ ಸೂರ್ಯ ಅವರಿಗೆ ಅನಾಮಿಕ ವ್ಯಕ್ತಿಗಳಿಂದ ಬೆದರಿಕೆ ಪತ್ರವೊಂದು ಬಂದಿದೆ. ಸಿ.ಟಿ ರವಿ ಮನೆಗೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ.

ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಈ ಕುರಿತು ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಅವಶ್ಯಕತೆ ಇದ್ದರೆ ಅವರ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!