Thursday, July 16, 2026
Homeತಾಜಾ ಸುದ್ದಿನಟ ಸುದೀಪ್ ಗೆ ಬೆದರಿಕೆ ಪತ್ರ ಬರೆದ ಪ್ರಕರಣ; ಕಿಚ್ಚನ ಆಪ್ತನ ಬಂಧನ

ನಟ ಸುದೀಪ್ ಗೆ ಬೆದರಿಕೆ ಪತ್ರ ಬರೆದ ಪ್ರಕರಣ; ಕಿಚ್ಚನ ಆಪ್ತನ ಬಂಧನ

- Advertisement -
- Advertisement -

ಬೆಂಗಳೂರು : ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀಪ್ ಆಪ್ತನನ್ನು ಬಂಧಿಸಲಾಗಿದೆ.  ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧಿತ ಆರೋಪಿ.

ಆರೋಪಿ ರಮೇಶ್ ಕಿಟ್ಟಿ, ಸುದೀಪ್ ಗೆ ಆಪ್ತನಾಗಿದ್ದು, ಸುದೀಪ್ ಜೊತೆ ಹಣಕಾಸು ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾದ ಕಾರಣ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾನೆ ಎನ್ನಲಾಗಿದೆ.

ರಮೇಶ್ ಕಿಟ್ಟಿ ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದನು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಹೂಡಿಕೆ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಹಾಗಾಗಿ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!