Friday, June 5, 2026
Homeಕರಾವಳಿಉಡುಪಿಉಡುಪಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅರೆಸ್ಟ್

ಉಡುಪಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅರೆಸ್ಟ್

- Advertisement -
- Advertisement -

ಉಡುಪಿ: ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ಉಪ್ಪೂರು – ಕೆಜಿ ರೋಡ್ ಸಮೀಪ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು ಎಂಟು ಲಕ್ಷ ರೂಪಾಯಿ ಮೌಲ್ಯದ 10 ಕೆಜಿ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.

ಸತ್ಯರಾಜ್‌ ತಂಬಿ (32) ಕೃಷ್ಣ (43) ಮತ್ತು ಶಕಿಲೇಶ್‌(25) ಬಂಧಿತ ಆರೋಪಿಗಳಾಗಿದ್ದಾರೆ.

ಸೆನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬಂಧಿತರಿಂದ ಮೂರು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!