Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಿದ ಮೂವರ ಬಂಧನ

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಿದ ಮೂವರ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ  ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಿದ ಮೂವರ ಬಂಧಿಸಲಾಗಿದೆ. ಶಾಹುಲ್ ಹಮೀತ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು.ಇನ್ನು ಉಳಿದ ಆರೋಪಿಗಳಿಗಾಗಿ  ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಘಟನೆಯ ವಿವರ;ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು  ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು  ರಾಜ್ಯಪಾಲರ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಉದ್ವಿಗ್ತರು  ಖಾಸಗಿ ಸಿಟಿ ಬಸ್‌ ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ ನ ಮುಂಭಾಗದ ಗಾಜು  ಹುಡಿಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನನಾಕರರನ್ನು ಹತೋಟಿಗೆ ತಂದಿದ್ದಾರೆ

‘ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕ ಸೀಟಿನ ಹಿಂದೆ ಕುಳಿತ್ತಿದ್ದ ಮಹಿಳೆಗೆ ಗಾಯವಾಗಿದೆ. ನಾಲ್ವರು ಸೇರಿ ಕಲ್ಲು ತೂರಿದ್ದಾರೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದು. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ’ ಎಂದು ಬಸ್ ಸಿಬ್ಬಂದಿ ಆರೋಪಿಸಿದ್ದರು.

- Advertisement -

Latest News

error: Content is protected !!