Sunday, August 30, 2026
Homeಕರಾವಳಿಇಂದು ಕರಾವಳಿಯಲ್ಲಿ 3 ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಇಂದು ಕರಾವಳಿಯಲ್ಲಿ 3 ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

- Advertisement -
- Advertisement -

ಮಂಗಳೂರು: ವಿಧಾನಸಭಾ ಚುನಾವಣೆಗೆ ಇಂದು ಕರಾವಳಿಯಲ್ಲಿ ಬಿಜೆಪಿಯ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್ ಪೂಂಜ ಇಂದು ಬೆಳಗ್ಗೆ 10.30 ಕ್ಕೆ ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸಚಿವ ವಿ. ಸುನೀಲ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ವೇದವ್ಯಾಸ ಕಾಮತ್  ಇಂದು ಮಧ್ಯಾಹ್ನ 12.10ಕ್ಕೆ ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ.

ಇನ್ನು ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರ್ಮೆ ಸುರೇಶ್ ಶೆಟ್ಟಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಭಾಗವಹಿಸಲಿದ್ದಾರೆ

- Advertisement -

Latest News

error: Content is protected !!