Thursday, June 4, 2026
Homeಕರಾವಳಿದ.ಕ. ಜಿಲ್ಲೆಯಲ್ಲಿಂದು ಮೂವರು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ದ.ಕ. ಜಿಲ್ಲೆಯಲ್ಲಿಂದು ಮೂವರು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರು ಬಿಜೆಪಿ ಅಭ್ಯರ್ಥಿಗಳು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಮೂಡಬಿದಿರೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ‌ ಶಾಸಕ ಉಮಾನಾಥ ಕೋಟ್ಯಾನ್ ಎರಡನೇ ಬಾರಿಗೆ ಆಯ್ಕೆ ಬಯಸಿ ‌ನಾಮಪತ್ರ ಸಲ್ಲಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ‌ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಲಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಡಾ. ವೈ . ಭರತ್ ಶೆಟ್ಟಿ ಎರಡನೇ ಬಾರಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ.

ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದ್ದಾರೆ.

- Advertisement -

Latest News

error: Content is protected !!