Wednesday, November 4, 2026
Homeಕರಾವಳಿಸೋಮನಾಥ ಪುತ್ರನ್ ಆತ್ಮಹತ್ಯೆ ಪ್ರಕರಣ ಸೇರಿ ಮೂರು ಪ್ರಕರಣಗಳು ಸಿಐಡಿಗೆ ಹಸ್ತಾಂತರ

ಸೋಮನಾಥ ಪುತ್ರನ್ ಆತ್ಮಹತ್ಯೆ ಪ್ರಕರಣ ಸೇರಿ ಮೂರು ಪ್ರಕರಣಗಳು ಸಿಐಡಿಗೆ ಹಸ್ತಾಂತರ

- Advertisement -
- Advertisement -

ಮಂಗಳೂರು: ಹೊಸಬೆಟ್ಟು ನಿವಾಸಿ ಹಾಗೂ ಮೊಗವೀರ ಸಮುದಾಯದ ಸದಸ್ಯ ಸೋಮನಾಥ ಪುತ್ರನ್ (48) ಅವರ ಆತ್ಮಹತ್ಯೆ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳ ತನಿಖೆಯನ್ನು ಹೆಚ್ಚಿನ ವಿಚಾರಣೆಗಾಗಿ ರಾಜ್ಯ ಪೊಲೀಸ್ ಇಲಾಖೆ ಸಿಐಡಿಗೆ ವಹಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳು ಹಾಗೂ ಒಂದು ಅಸ್ವಾಭಾವಿಕ ಮರಣ ವರದಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಈ ಮೂರು ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲಾ ಕಡತಗಳು ಹಾಗೂ ದಾಖಲೆಗಳನ್ನು ಸಿಐಡಿ ತನಿಖಾಧಿಕಾರಿಗೆ ಹಸ್ತಾಂತರಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!