Wednesday, June 3, 2026
Homeಕರಾವಳಿಉಡುಪಿಕರಾವಳಿಯಲ್ಲಿ ಇಂದಿನಿಂದ ಮೂರು‌ ದಿನ ಭಾರೀ ಮಳೆ: ಹೈ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಇಂದಿನಿಂದ ಮೂರು‌ ದಿನ ಭಾರೀ ಮಳೆ: ಹೈ ಅಲರ್ಟ್ ಘೋಷಣೆ

- Advertisement -
- Advertisement -

ಮಂಗಳೂರು;  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಅಪಾಯದ ಗ್ರಾಮಗಳು ಹಾಗೂ ಸ್ಥಳಗಳನ್ನು ಗುರುತು ಮಾಡಲಾಗಿದೆ. ಎನ್.ಆರ್. ಪುರದ 21, ಮೂಡಿಗೆರೆಯ 33, ಚಿಕ್ಕಮಗಳೂರಿನ 5, ಕೊಪ್ಪದ 6, ಶೃಂಗೇರಿಯ 9, ಕಡೂರಿನ 2 ತರೀಕೆರೆಯ 1 ಗ್ರಾಮವನ್ನು ಜಿಲ್ಲಾಡಳಿತ ಅಪಾಯದ ಗ್ರಾಮಗಳೆಂದು ಗುರುತಿಸಿದೆ.

- Advertisement -

Latest News

error: Content is protected !!