Thursday, June 4, 2026
HomeUncategorizedರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

- Advertisement -
- Advertisement -

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ಮೇ 5 ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬುಧವಾರವೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಮಳೆಯಿಂದಾಗಿ ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿಯಲ್ಲಿ ಸಿಡಿಲು ಬಡಿದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!