Thursday, June 4, 2026
Homeಕರಾವಳಿಉಡುಪಿಮಡಗಾಂವ್ ಮತ್ತು ಮಂಗಳೂರು ಜಂಕ್ಷನ್ ನಡುವೆ 3 ದಿನ ಮೆಮು ವಿಶೇಷ ರೈಲು ಸಂಚಾರ

ಮಡಗಾಂವ್ ಮತ್ತು ಮಂಗಳೂರು ಜಂಕ್ಷನ್ ನಡುವೆ 3 ದಿನ ಮೆಮು ವಿಶೇಷ ರೈಲು ಸಂಚಾರ

- Advertisement -
- Advertisement -

ಉಡುಪಿ: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಗೋವಾಕ್ಕೆ ತೆರಳುವ ಹೆದ್ದಾರಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡಲಾಗಿದೆ‌.

ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.ಇಂದಿನಿಂದ ಜುಲೈ 22ರ ವರೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಮೂರು ದಿನಗಳ ಕಾಲ ಹೆಚ್ಚುವರಿ ರೈಲು ಸಂಚರಿಸಲಿದೆ‌.

ಬೆಳಿಗ್ಗೆ 6 ಗಂಟೆಗೆ ಮಡಗಾಂವ್ ಜಂಕ್ಷನ್ ನಿಂದ ಹೊರಡಲಿರುವ ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ನಂತರ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿರುವ ಮೆಮು ವಿಶೇಷ ರೈಲು ರಾತ್ರಿ 7 ಗಂಟೆಗೆ ಮಡಗಾಂವ್ ತಲುಪಲಿದೆ.

ಕಾಣಕೋಣ, ಕಾರವಾರ, ಹರ್ವಾಡ, ಅಂಕೋಲಾ, ಗೋಕರ್ಣ ರೋಡ್, ಮಿರ್ಜಾನ್, ಕುಮಟಾ, ಹೊನ್ನಾವರ, ಮಂಕಿ, ಮುರುಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರ್ಕೂರು, ಉಡುಪಿ, ಮೂಲ್ಕಿ, ಸುರತ್ಕಲ್ ಮತ್ತು ತೋಕೂರು ನಿಲ್ದಾಣಗಳಲ್ಲಿ ಮೆಮು ವಿಶೇಷ ರೈಲು ನಿಲುಗಡೆ ಇರಲಿದೆ.

- Advertisement -

Latest News

error: Content is protected !!