Sunday, September 20, 2026
HomeUncategorizedಮಡಿಕೇರಿ: ಆನೆಕಾಡು ಬಳಿ ಭೀಕರ ರಸ್ತೆ ಅಪಘಾತ, ಮೂವರು ಸಾವು

ಮಡಿಕೇರಿ: ಆನೆಕಾಡು ಬಳಿ ಭೀಕರ ರಸ್ತೆ ಅಪಘಾತ, ಮೂವರು ಸಾವು

- Advertisement -
- Advertisement -

ಮಡಿಕೇರಿ: ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ಪಿಕ್‌ಅಪ್ ವಾಹನಕ್ಕೆ ಅಪ್ಪಳಿಸಿದೆ. ಪರಿಣಾಮ ಕಾರು ಚಾಲಕ ರತನ್ (ಉಣ್ಣಿ) ಹಾಗೂ ಅರಣ್ಯ ಇಲಾಖೆಯ ವಾಚ್‌ಮೆನ್ ಕುಮಾರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸುವಿನ್, ಆದರ್ಶ್, ಚಂದ್ರಶೇಖರ್ ಹಾಗೂ ಅಜಯ್ ಅವರನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರು ಹಾಗೂ ಮಡಿಕೇರಿಗೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕುಶಾಲನಗರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!