ಸುಳ್ಯ; ಅಡ್ಕಾರಿನ ಹೊಟೇಲೊಂದರ ಬಳಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರು ಕೆಲಸದ ಹಿನ್ನೆಲೆ ನಿನ್ನೆ ಅಡ್ಕಾರಿಗೆ ಆಗಮಿಸಿ ಕಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು ಬೆಳಿಗ್ಗೆ ಅವರಲ್ಲಿ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರು ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.
ಈ ವೇಳೆ ಹುಣಸೂರು ಕಡೆಯಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಈ ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. .ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರಿಗೂ ಗಾಯಗಳಾಗಿದ್ದು ಮೂವರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಈ ಪೈಕಿ ಚಂದ್ರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದರು. ವೆಂಕಪ್ಪ ಎಂಬವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಸುಳ್ಯದಲ್ಲೇ ಚಿಕಿತ್ಸೆ ಕೊಡಿಸಲಾಗಿದೆ. .ರೇಗಪ್ಪ, ಮಾಂತೇಶ್ ಅವರನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದ್ದು, ಅವರಿಬ್ಬರೂ ಇದೀಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.