- Advertisement -


- Advertisement -
ಶಿವಮೊಗ್ಗ: ಹುಲಿಕಲ್ ಘಾಟ್ ನಲ್ಲಿ ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಬ್ಬರು ಕಾರ್ಮಿಕರು ಮತ್ತು ಓರ್ವ ಕಾಮಗಾರಿ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿ ಅವಘಡದಲ್ಲಿ ಮೃತಪಟ್ಟಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ನಲ್ಲಿ
ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ರಕ್ಷಣೆ ಕಾರ್ಯಾಚರಣೆ ನಡೆಸಲಾಗಿದ್ದು, ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.
ರಸ್ತೆ ಅಗಲೀಕರಣದ ವೇಳೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಮತ್ತು ಹೊಸನಗರ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


