Monday, May 13, 2024
Homeತಾಜಾ ಸುದ್ದಿಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಯೋಜನೆಯಡಿ ವಿಲೀನ

ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಯೋಜನೆಯಡಿ ವಿಲೀನ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ.

ಇದರೊಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದೊರೆಯಲಿದೆ.

ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದ್ದು, ಜುಲೈ 1 ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ,‌ ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು? ಇದರ ಫಲಾನುಭವಿಗಳಿಗೆ ಏನಾಗುತ್ತದೆ? ಎನ್ನುವ ಗೊಂದಲ ಕಾಡುತ್ತಿತ್ತು.

ಇದೀಗ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಭಾಗ್ಯ ಜ್ಯೋತಿ ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇದ್ದಿದ್ದನ್ನು ಈಗ ಅದನ್ನು 53 ಯೂನಿಟ್ ಹಾಗೂ 10% ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೋಷಿಸಿದೆ.

ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇದ್ದಿದ್ದನ್ನು ಈಗ ಅದನ್ನು 75 ಯೂನಿಟ್ ಪ್ಲಸ್ 10% ಮಾಡಿದ್ದಾರೆ. ಈಗ ಎಲ್ಲರೂ ಗೃಹ ಜ್ಯೋತಿ ವ್ಯಾಪ್ತಿಗೆ ಬರಲಿದ್ದು, ಅವರಿಗೆ ಹೆಚ್ಚುವರಿ ಯೂನಿಟ್ ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!