Thursday, June 13, 2024
Homeತಾಜಾ ಸುದ್ದಿಮೂವರು ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

spot_img
- Advertisement -
- Advertisement -

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾ. ಅನಂತ ರಾಮನಾಥ ಹೆಗಡೆ, ನ್ಯಾ. ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ನ್ಯಾ. ಸಿದ್ದಯ್ಯ ರಾಚಯ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ
ಸೇರಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!