Saturday, April 27, 2024
Homeತಾಜಾ ಸುದ್ದಿಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ : ಮೂವರು ರೋಗಿಗಳು ಸಾವು

ಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ : ಮೂವರು ರೋಗಿಗಳು ಸಾವು

spot_img
- Advertisement -
- Advertisement -

ಮುಂಬೈ: ಇಂದು ಮುಂಜಾನೆ 3.40ರ ಸಮಯಕ್ಕೆ ಥಾಣೆ ಬಳಿಯ ಮುಂಬ್ರಾ ಪ್ರದೇಶದ ಕೌಸಾದಲ್ಲಿರುವ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಮೂರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆದರೆ ಮೃತರು ಕೋವಿಡ್ ಯಾರು ಕೊರೋನಾ ಸೋಂಕಿತರಲ್ಲ ಮತ್ತು ಈ ಆಸ್ಪತ್ರೆಯಲ್ಲಿ ಕೊರೋನಾವೈರಸ್ ರೋಗಿಗಳಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂರು ಅಗ್ನಿಶಾಮಕ ವಾಹನಗಳು ಮತ್ತು ಐದು ಆಂಬುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿದ್ದ ಆರು ಮಂದಿ ಸೇರಿದಂತೆ 20 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳೀಯ ಶಾಸಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವಾದ್ ಘಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದುರಂತದ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರತಿ ಮೃತ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂ. ವನ್ನು ಪರಿಹಾರ ನೀಡಲಾಗುತ್ತಿದೆ ಎಂದರು.

ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಥಾಣೆ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ಮತ್ತು ಪೊಲೀಸ್ ಮತ್ತು ವೈದ್ಯಕೀಯ ಅಧಿಕಾರಿಗಳನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.

ಏಪ್ರಿಲ್ 23 ರಂದು ಪಕ್ಕದ ಪಾಲ್ಘರ್ ಜಿಲ್ಲೆಯ ವಿರಾರ್ ನಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು 15 ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದರು.

- Advertisement -
spot_img

Latest News

error: Content is protected !!