Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ

ಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ

- Advertisement -
- Advertisement -

ಬೆಳ್ತಂಗಡಿ : ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೆಳೆ ನಡೆದಿದೆ. ಈ ಬಗ್ಗೆ  ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಬಡಿದು ಮುರಿದು ಒಳನುಗ್ಗಿ  ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ. ಬಾಲಾಜಿ ಎಂಟರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ಟ್ರಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!