Monday, June 29, 2026
Homeತಾಜಾ ಸುದ್ದಿಶಾಲೆಯಿಂದ ಮೂವರು ವಿದ್ಯಾರ್ಥಿಗಳು ನಾಪತ್ತೆ ಪ್ರಕರಣ

ಶಾಲೆಯಿಂದ ಮೂವರು ವಿದ್ಯಾರ್ಥಿಗಳು ನಾಪತ್ತೆ ಪ್ರಕರಣ

- Advertisement -
- Advertisement -

ಬೆಂಗಳೂರು: ಇಲ್ಲಿನ ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿಗಳು ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ತೆರಳಿದ್ದು, ಮನೆಗೂ ಬಾರದೆ ಕಾಣೆಯಾಗಿದ್ದಾರೆ. ಇನ್ನು ವಿದ್ಯಾರ್ಥಿಗಳು ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್ ಒಂದನ್ನು ಪಡೆದಿದ್ದು, ಅದನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಶಾಲೆಯ ಬಳಿಯಿರುವ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ.

ಹೇಮಂತ್ ಗೌಡ, ಪವನ್ ಮತ್ತು ಸಂಜಯ್ ನಾಪತ್ತೆಯಾದ ವಿದ್ಯಾರ್ಥಿಗಳು. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!